ಹಾಲಿ ಐಪಿಎಲ್ ಚಾಂಪಿಯನ್ ಮುಂಬೈ ಎದುರು ಪಂಜಾಬ್ ಶರಣಾಗಿದ್ದು ಹೇಗೆ..?

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಲು ಅವಕಾಶ ಪಡೆದ ಮುಂಬೈ ಇಂಡಿಯನ್ಸ್ ತಂಡ ಆರಂಭಿಕ ಆಘಾತದ ಹೊರತಾಗಿಯೂ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಹಾಗೂ ಪೊಲ್ಲಾರ್ಡ್ ಹಾಗೂ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್ ಕಳೆದುಕೊಂಡು 191 ರನ್ ಕಲೆಹಾಕಿತ್ತು.

Share this Video
  • FB
  • Linkdin
  • Whatsapp

ಅಬುಧಾಬಿ(ಅ.02): ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಆಘಾತಕಾರಿ ಸೋಲು ಕಂಡಿದೆ. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಹೌದು, ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಲು ಅವಕಾಶ ಪಡೆದ ಮುಂಬೈ ಇಂಡಿಯನ್ಸ್ ತಂಡ ಆರಂಭಿಕ ಆಘಾತದ ಹೊರತಾಗಿಯೂ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಹಾಗೂ ಪೊಲ್ಲಾರ್ಡ್ ಹಾಗೂ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್ ಕಳೆದುಕೊಂಡು 191 ರನ್ ಕಲೆಹಾಕಿತ್ತು.

IPL 2020: ಪಂಜಾಬ್‌ಗೆ ಸೋಲಿನ ಶಾಕ್ ನೀಡಿದ ಮುಂಬೈ!

ಇನ್ನು ಸ್ಪೋಟಕ ಬ್ಯಾಟ್ಸ್‌ಮನ್‌ಗಳ ದಂಡೇ ಹೊಂದಿರುವ ಕೆ.ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಮುಂಬೈ ಸಂಘಟಿತ ಬೌಲಿಂಗ್ ಪ್ರದರ್ಶನಕ್ಕೆ ತತ್ತರಿಸಿ ಹೋಯಿತು. ಈ ಪಂದ್ಯ ಹೇಗಿತ್ತು? ಪಂದ್ಯದ ಟರ್ನಿಂಗ್ ಪಾಯಿಂಟ್ ಏನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

Related Video