Asianet Suvarna News Asianet Suvarna News

ಮುಂಬೈ ವಿರುದ್ಧ ಹಳೆ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಕೆಕೆಆರ್..?

ಸದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕೋಲ್ಕತ ನೈಟ್‌ ರೈಡರ್ಸ್ ತಂಡ 4ನೇ ಸ್ಥಾನದಲ್ಲಿದೆ. ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.
 

ಬೆಂಗಳೂರು(ಅ.16): ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಹಾಗೂ ಬಲಿಷ್ಠ ಕೋಲ್ಕತ ನೈಟ್‌ ರೈಡರ್ಸ್‌ ತಂಡಗಳು ಅಬುಧಾಬಿಯ ಶೇಖ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗುತ್ತಿದ್ದು, ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.

ಸದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕೋಲ್ಕತ ನೈಟ್‌ ರೈಡರ್ಸ್ ತಂಡ 4ನೇ ಸ್ಥಾನದಲ್ಲಿದೆ. ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.

RCB ವಿರುದ್ಧ ಸೋಲಿನ ಬೆನ್ನಲ್ಲೇ ಕಾರ್ತಿಕ್ ತಲೆದಂಡ; ಕೆಕೆಆರ್ ತಂಡಕ್ಕೀಗ ಹೊಸ ನಾಯಕ ಆಯ್ಕೆ.!

ಇನ್ನು ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ಕೆಕೆಆರ್ ತಂಡ 49 ರನ್‌ಗಳಿಂದ ಶರಣಾಗಿತ್ತು. ಆದರೆ ಇದೀಗ ಮುಂಬೈಗೆ ತಿರುಗೇಟು ನೀಡಲು ಕೆಕೆಆರ್ ಪಡೆ ಸಜ್ಜಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories