Asianet Suvarna News Asianet Suvarna News

IPL 2020: ಎಬಿ ಡಿವಿಲಿಯರ್ಸ್ ಭೀತಿಯಲ್ಲಿ ಕೆಕೆಆರ್..!

ಎರಡು ತಂಡಗಳು ಕಳೆದ ಪಂದ್ಯದಲ್ಲಿ ರೋಚಕ ಜಯ ದಾಖಲಿಸಿದ್ದು, ಅದೇ ಗೆಲುವಿನ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿವೆ. ಸದ್ಯ ಆರ್‌ಸಿಬಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದರೆ, ಕೆಕೆಆರ್ 4ನೇ ಸ್ಥಾನದಲ್ಲಿದೆ.
 

ಅಬುಧಾಬಿ(ಅ.21): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 39ನೇ ಪಂದ್ಯದಲ್ಲಿಂದು ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡಗಳು ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ಎರಡು ತಂಡಗಳು ಕಳೆದ ಪಂದ್ಯದಲ್ಲಿ ರೋಚಕ ಜಯ ದಾಖಲಿಸಿದ್ದು, ಅದೇ ಗೆಲುವಿನ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿವೆ. ಸದ್ಯ ಆರ್‌ಸಿಬಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದರೆ, ಕೆಕೆಆರ್ 4ನೇ ಸ್ಥಾನದಲ್ಲಿದೆ.

RCB ವಿರುದ್ಧ ಶತಕ ಬಾರಿಸಿ, ಚಿನ್ನದಂತ ಮಾತನಾಡಿದ ಕನ್ನಡಿಗ ಕೆ ಎಲ್ ರಾಹುಲ್..!

ಇನ್ನು ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ಎಬಿ ಡಿವಿಲಿಯರ್ಸ್ ಇಂದು ಕೆಕೆಆರ್ ಮೇಲೂ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಸಾಧ್ಯತೆಯಿದೆ. ಇನ್ನು ಕೆಕೆಆರ್ ತಂಡದ ನಾಯಕ ಇಯಾನ್ ಮಾರ್ಗನ್ 300ನೇ ಪಂದ್ಯವನ್ನಾಡುತ್ತಿದ್ದು, ಸ್ಮರಣೀಯವಾಗಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಎರಡು ತಂಡಗಳ ಬಲಾಬಲ, ಸಂಭಾವ್ಯ ತಂಡ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
 

Video Top Stories