IPL 2020: ಆರ್‌ಸಿಬಿ ಎದುರು ಕೊನೆ ಓವರ್ ಹೈಡ್ರಾಮ ಗೆದ್ದ ಪಂಜಾಬ್..!

ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಕೆಲವೊಂದು ನಿರ್ಧಾರಗಳು ಆರ್‌ಸಿಬಿ ಸೋಲಿಗೆ ಪ್ರಮುಖ ಕಾರಣವಾದವು. ಅದರಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದ ಎಬಿ ಡಿವಿಲಿಯರ್ಸ್ ಅವರನ್ನು 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಸಿದ್ದು ಕೂಡಾ ಒಂದು.

Share this Video
  • FB
  • Linkdin
  • Whatsapp

ಬೆಂಗಳೂರು(ಅ.16): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಆರ್‌ಸಿಬಿ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯದ ಕೊನೆಯ ಓವರ್ ಸಾಕಷ್ಟು ಹೈಡ್ರಾಮಕ್ಕೆ ಸಾಕ್ಷಿಯಾಯಿತು. ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಪಂಜಾಬ್ ರೋಚಕ ಜಯ ದಾಖಲಿಸಿದೆ.

ಹೌದು, ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಕೆಲವೊಂದು ನಿರ್ಧಾರಗಳು ಆರ್‌ಸಿಬಿ ಸೋಲಿಗೆ ಪ್ರಮುಖ ಕಾರಣವಾದವು. ಅದರಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದ ಎಬಿ ಡಿವಿಲಿಯರ್ಸ್ ಅವರನ್ನು 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಸಿದ್ದು ಕೂಡಾ ಒಂದು.

IPL 2020: ಗೇಲ್ ತಂದ ಅದೃಷ್ಟ; RCB ವಿರುದ್ಧ ಪಂಜಾಬ್‌ಗೆ ರೋಚಕ ಗೆಲುವು!

ಆರ್‌ಸಿಬಿ 6 ವಿಕೆಟ್ ಕಳೆದುಕೊಂಡು 171 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ರಾಹುಲ್-ಗೇಲ್ ಅರ್ಧಶತಕ ಬಾರಿಸಿದರಾದರೂ ಕೊನೆಯ ಓವರ್‌ನಲ್ಲಿ ಪಂಜಾಬ್ 2 ರನ್ ಬಾರಿಸಲು ಪರದಾಡಿತು. ಆದರೆ ಕೊನೆಯಲ್ಲಿ ಪೂರನ್ ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಈ ಪಂದ್ಯದ ವಿಶ್ಲೇಷಣೆ ಇಲ್ಲಿದೆ ನೋಡಿ.

Related Video