Asianet Suvarna News Asianet Suvarna News

ಸನ್‌ರೈಸರ್ಸ್‌ ಎದುರು ಮಾಡು ಇಲ್ಲವೇ ಮಡಿ ಪಂದ್ಯವನ್ನು ಜಯಿಸುತ್ತಾ ಆರ್‌ಸಿಬಿ..?

Nov 6, 2020, 3:44 PM IST

ಬೆಂಗಳೂರು(ನ.06): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಅಬುಧಾಬಿಯ ಶೇಕ್ ಜಾಯೆದ್ ಮೈದಾನ ಆತಿಥ್ಯವನ್ನು ವಹಿಸಿದೆ.

ಎರಡು ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಂತಾಗಿದ್ದು, ಗೆದ್ದ ತಂಡ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆಗಿಟ್ಟಿಸಿಕೊಂಡರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ 2 ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸುವ ಸಾಧ್ಯತೆಯಿದೆ.

ಮುಂಬೈ ಇಂಡಿಯನ್ಸ್‌ಗೆ ಲಕ್ಕಿ ಆಂಟಿ ಸಾಥ್; ಡೆಲ್ಲಿಗೆ ಹೀನಾಯ ಸೋಲು..!

ಎರಡು ತಂಡಗಳ ಬಲಾಬಲ, ಸಂಭಾವ್ಯ ತಂಡ ಹೇಗಿರಲಿದೆ, ಈ ಹಿಂದಿನ ಪ್ಲೇ ಆಫ್‌ ಟ್ರ್ಯಾಕ್‌ ರೆಕಾರ್ಡ್ ಹೇಗಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.