IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆ ಬಳಿಕ ಬೌಲಿಂಗ್‌ನಲ್ಲೂ ಮಾರಕ ದಾಳಿ ಸಂಘಟಿಸುವುದರ ಮೂಲಕ ಹೆಸರಿಗೆ ತಕ್ಕಂತೆ ಚಾಂಪಿಯನ್ ತಂಡ ಎನ್ನುವುದನ್ನು ಮತ್ತೊಮ್ಮೆ ಸಾಭೀತು ಮಾಡಿದೆ.
ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಫೈನಲ್ ಪ್ರವೇಶಿಸಿದೆ. ಈ ಮೂಲಕ ಎರಡನೇ ವರ್ಷವೂ ಮುಂಬೈ ಇಂಡಿಯನ್ಸ್ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.
ಹೌದು, ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆ ಬಳಿಕ ಬೌಲಿಂಗ್‌ನಲ್ಲೂ ಮಾರಕ ದಾಳಿ ಸಂಘಟಿಸುವುದರ ಮೂಲಕ ಹೆಸರಿಗೆ ತಕ್ಕಂತೆ ಚಾಂಪಿಯನ್ ತಂಡ ಎನ್ನುವುದನ್ನು ಮತ್ತೊಮ್ಮೆ ಸಾಭೀತು ಮಾಡಿದೆ.
IPL 2020: ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಎಡವಿದ್ದೆಲ್ಲಿ..?
ಸದ್ಯದ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನವನ್ನು ಗಮನಿಸಿದರೆ ಈ ಬಾರಿಯೂ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ನವೆಂಬರ್ 10ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಂಬೈಗೆ ಮತ್ತೆ ಡೆಲ್ಲಿ ಕ್ಯಾಪಿಟಲ್ಸ್ ಇಲ್ಲವೇ ಸನ್‌ರೈಸರ್ಸ್ ಹೈದರಾಬಾದ್ ತಂಡ ಸವಾಲೆಸೆಯುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.