Asianet Suvarna News Asianet Suvarna News

IPL 2020: ಕನ್ನಡಿಗರಿರುವ ಪಂಜಾಬ್ ಮಣಿಸಲು ಆರ್‌ಸಿಬಿ ರೆಡಿ..!

ಒಂದು ಕಡೆ ಕನ್ನಡಿಗರಿರುವ ಪಂಜಾಬ್ ತಂಡವಾದರೆ, ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪೈಪೋಟಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳು ಬಲಿಷ್ಠವಾಗಿವೆ.

ದುಬೈ(ಸೆ.24): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಆರನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆ.ಎಲ್. ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ಎದುರಿಸಲು ಸಜ್ಜಾಗಿದೆ.

ಒಂದು ಕಡೆ ಕನ್ನಡಿಗರಿರುವ ಪಂಜಾಬ್ ತಂಡವಾದರೆ, ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪೈಪೋಟಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳು ಬಲಿಷ್ಠವಾಗಿವೆ.

IPL 2020: ಪಂಜಾಬ್ ವಿರುದ್ಧದ ಪಂದ್ಯಕ್ಕೆ RCB ತಂಡದಲ್ಲಿ ಒಂದು ಬದಲಾವಣೆ..?

ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ನಾಗಾಲೋಟ ಮುಂದುವರೆಸುವ ಲೆಕ್ಕಾಚಾರದಲ್ಲಿದೆ. ಇನ್ನು ಮೊದಲ ಪಂದ್ಯದಲ್ಲಿ ಅನಿರೀಕ್ಷಿತ ಸೋಲು ಕಂಡಿರುವ ಪಂಜಾಬ್ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ.
 

Video Top Stories