Asianet Suvarna News Asianet Suvarna News

IPL 2020: ಮುಂಬೈ ವಿರುದ್ಧ ಗೆದ್ದು ಬೀಗುತ್ತಾ RCB..?

ಈಗಾಗಲೇ ಉಭಯ ತಂಡಗಳು ತಲಾ ಎರಡು ಪಂದ್ಯಗಳನ್ನಾಡಿದ್ದು ಒಂದರಲ್ಲಿ ಗೆಲುವು ಮತ್ತೊಂದರಲ್ಲಿ ಸೋಲು ಕಂಡಿವೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲವು ಸಾಧಿಸಿ ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿವೆ.
 

ದುಬೈ(ಸೆ.28): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 10ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಾಡಲಿದೆ. ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ.

ಈಗಾಗಲೇ ಉಭಯ ತಂಡಗಳು ತಲಾ ಎರಡು ಪಂದ್ಯಗಳನ್ನಾಡಿದ್ದು ಒಂದರಲ್ಲಿ ಗೆಲುವು ಮತ್ತೊಂದರಲ್ಲಿ ಸೋಲು ಕಂಡಿವೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲವು ಸಾಧಿಸಿ ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿವೆ.

IPL 2020: ಮುಂಬೈ ವಿರುದ್ಧದ ಪಂದ್ಯಕ್ಕೆ RCB ತಂಡದಲ್ಲಿ 3 ಪ್ರಮುಖ ಬದಲಾವಣೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿದರೂ ಅಚ್ಚರಿಯಿಲ್ಲ. ಈ ಹಿಂದಿನ ಕಾದಾಟದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ? ಆರ್‌ಸಿಬಿ ತಂಡ ಯಾರ ಮೇಲೆ ಹೆಚ್ಚು ಅವಲಂಭಿತವಾಗಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.