Asianet Suvarna News Asianet Suvarna News

IPL 2020: ಹೈದರಾಬಾದ್ ಕೈಯಿಂದ ಗೆಲುವನ್ನು ಕಸಿದುಕೊಂಡ ಚಹಲ್..!

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಬೆಂಗಳೂರಿಗೆ ಕನ್ನಡಿಗ ದೇವದತ್ ಪಡಿಕ್ಕಲ್, ಆ್ಯರೋನ್ ಫಿಂಚ್ ಉತ್ತಮ ಆರಂಭ ಒದಗಿಸಿಕೊಟ್ಟರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ತಂಡ ಸ್ಫರ್ಧಾತ್ಮಕ ಮೊತ್ತ ಕಲೆ ಹಾಕಲು ನೆರವಾದರು.

ಬೆಂಗಳೂರು: ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 10 ರನ್‌ಗಳ ಭರ್ಜರಿ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಬೆಂಗಳೂರಿಗೆ ಕನ್ನಡಿಗ ದೇವದತ್ ಪಡಿಕ್ಕಲ್, ಆ್ಯರೋನ್ ಫಿಂಚ್ ಉತ್ತಮ ಆರಂಭ ಒದಗಿಸಿಕೊಟ್ಟರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ತಂಡ ಸ್ಫರ್ಧಾತ್ಮಕ ಮೊತ್ತ ಕಲೆ ಹಾಕಲು ನೆರವಾದರು.

IPL 2020: ಫಿಫ್ಟಿ ಬಾರಿಸಿ ಕನ್ನಡಿಗರಲ್ಲಿ ವಿಶೇಷ ಮನವಿ ಮಾಡಿಕೊಂಡ ದೇವದತ್ ಪಡಿಕ್ಕಲ್..!

ಇನ್ನು ಜಾನಿ ಬೇರ್‌ಸ್ಟೋವ್ ಹಾಗೂ ಮನೀಶ್ ಪಾಂಡೆ ಸಮಯೋಚಿತ ಜತೆಯಾಟವಾಡುವ ಮೂಲಕ ಹೈದರಾಬಾದ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಇನ್ನೇನು ಪಂದ್ಯ ಹೈದರಾಬಾದ್ ಪಾಲಾಯಿತು ಎನ್ನುವಷ್ಟರಲ್ಲಿ ಚಹಲ್ ಮ್ಯಾಜಿಕ್ ಮಾಡಿದೆ. RCB vs SRH ಪಂದ್ಯ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.