Asianet Suvarna News Asianet Suvarna News

ಮತ್ತೆ ಐಪಿಎಲ್ ಚಾಂಪಿಯನ್ ಆಗುತ್ತಾ ಸನ್‌ರೈಸರ್ಸ್..?

ಹೈದರಾಬಾದ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫಿಂಚ್ ಹಾಗೂ ಎಬಿ ಡಿವಿಲಿಯರ್ಸ್ ಹೊರತಾಗಿ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರಲಿಲ್ಲ. ಇನ್ನು ಇನ್ನು ಸುಲಭ ಮೊತ್ತವನ್ನು ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 6 ವಿಕೆಟ್‌ಗಳ ಜಯ ಸಾಧಿಸಿದೆ.

ಬೆಂಗಳೂರು(ನ.07): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದೆ.

ಹೌದು, ಹೈದರಾಬಾದ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫಿಂಚ್ ಹಾಗೂ ಎಬಿ ಡಿವಿಲಿಯರ್ಸ್ ಹೊರತಾಗಿ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರಲಿಲ್ಲ. ಇನ್ನು ಇನ್ನು ಸುಲಭ ಮೊತ್ತವನ್ನು ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 6 ವಿಕೆಟ್‌ಗಳ ಜಯ ಸಾಧಿಸಿದೆ.

ಹೈದರಾಬಾದ್ ವಿರುದ್ದ ಮುಗ್ಗರಿಸಿದ RCB, ಟೂರ್ನಿಯಿಂದ ಔಟ್!

ಇದುವರೆಗೂ ಸನ್‌ರೈಸರ್ಸ್ ಹೈದರಾಬಾದ್ ತಂಡ 5 ಬಾರಿ ಪ್ಲೇ ಆಫ್‌ ಎಲಿಮಿನೇಟರ್ ಪಂದ್ಯವನ್ನಾಡಿದ್ದು, ಎಲಿಮಿನೇಟರ್ ಪಂದ್ಯ ಗೆದ್ದ ವರ್ಷ ವಾರ್ನರ್ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹೀಗಾಗಿ ಈ ಬಾರಿಯೂ ಆರೆಂಜ್ ಆರ್ಮಿ ಐಪಿಎಲ್ ಟ್ರೋಫಿ ಜಯಿಸಬಹುದು ಎನ್ನುವ ಲೆಕ್ಕಾಚಾರ ಜೋರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.