Hijab Row Protest: ಹಿಜಾಬ್‌ ವಿವಾದ, ಶಾಸಕಿ ಕನೀಜ್ ಫಾತಿಮಾ ನೇತೃತ್ವದಲ್ಲಿ ಪ್ರತಿಭಟನೆ

ಉಡುಪಿ ಮತ್ತು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ಬಂದ ವಿದ್ಯಾರ್ಥಿನಿಯರನ್ನು ಕಾಲೇಜು ಪ್ರವೇಶಕ್ಕೆ ನಿರಾಕರಿಸಿದ ಕ್ರಮ ಖಂಡಿಸಿ ಕಾಂಗ್ರೆಸ್ ಶಾಸಕಿ ಕನೀಜ್ ಫಾತಿಮಾ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.

First Published Feb 5, 2022, 6:59 PM IST | Last Updated Feb 5, 2022, 6:59 PM IST

ಕಲಬುರಗಿ(ಫೆ.5): ಉಡುಪಿ (Udupi) ಮತ್ತು ಕುಂದಾಪುರ (Kundapura)ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ (Hijab) ಧರಿಸಿದ ಬಂದ ವಿದ್ಯಾರ್ಥಿನಿಯರನ್ನು ಕಾಲೇಜು ಪ್ರವೇಶಕ್ಕೆ ನಿರಾಕರಿಸಿದ ಕ್ರಮ ಖಂಡಿಸಿ ಕಾಂಗ್ರೆಸ್ ಶಾಸಕಿ ಕನೀಜ್ ಫಾತಿಮಾ (Kaneez Fatima) ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹಿಬಾಬ್ ನಮ್ಮ ಹಕ್ಕು, ಇದು ಮುಸ್ಲಿಂ ಮಹಿಳೆಯರ ಮೂಲಭೂತ ಹಕ್ಕು ಎಂದು ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

Kundapura Hijab Row: ಕುಂದಾಪುರದ ಖಾಸಗಿ ಕಾಲೇಜಿಗೆ ವ್ಯಾಪಿಸಿದ ಹಿಜಾಬ್ ವಿವಾದ

ಇದೇ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ, ಮಾತನಾಡಿ ನಾನು ಹಿಜಾಬ್ ಧರಿಸಿಕೊಂಡೇ ವಿಧಾನ ಸೌಧದ ಕಲಾಪಗಳಲ್ಲಿ ಭಾಗವಹಿಸಿದ್ದೇನೆ. ನನ್ನ ಕ್ಷೇತ್ರದ ಜನರ ಸಮಸ್ಯೆ, ಬೇಡಿಕೆಗಳ ಬಗ್ಗೆ ಸದನದಲ್ಲಿ ಮಾತನಾಡಿದ್ದೇನೆ. ಹಾಗಾದರೆ ಇನ್ನು ಮುಂದೆ ನಾನು ಕಲಾಪಕ್ಕೆ ಬರದಂತೆ ತಡೆಯುತ್ತೀರಾ ಎಂದು ಪ್ರಶ್ನಿಸಿದರು.

Video Top Stories