Asianet Suvarna News Asianet Suvarna News

ಯಾದಗಿರಿ: ಬಸವಸಾಗರ ಡ್ಯಾಂ ಭರ್ತಿ, 1 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

Aug 10, 2020, 1:37 PM IST

ಯಾದಗಿರಿ(ಆ.10): ಕೃಷ್ಣಾ ನದಿಗೆ ನೀರಿನ ಒಳ ಹರಿವು ಹೆಚ್ಚಾದ ಪರಿಣಾಮ ಜಿಲ್ಲೆಯ ಬಸವಸಾಗರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ 14 ಗೇಟ್‌ಗಳ ಮೂಲಕ ನದಿಗೆ ಒಂದು ಲಕ್ಷ ಕ್ಯೂಸೆಕ್ಸ್‌ ನೀರನ್ನ ಬಿಡುಗಡೆ ಮಾಡಲಾಗುತ್ತಿದೆ. 

ಮಡಿಕೇರಿಯಲ್ಲಿ ಬಿಡುವು ಕೊಟ್ಟ ಮಳೆರಾಯ; ಆಪರೇಷನ್ ಬ್ರಹ್ಮಗಿರಿ ಚುರುಕು

ಮಹಾರಾಷ್ಟ್ರದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಬಸವಸಾಗರ ಡ್ಯಾಂ ಸಂಪೂರ್ಣವಾಗಿ ತುಂಬಿದೆ. ಇದರಿಂದ ಈ ಭಾಗದ ರೈತರ ಮೊಗದಲ್ಲಿ ಸಂತಸ ಮೂಡಿದೆ.