ಬೆಂಗಳೂರು: ಬೈಕ್‌ನಲ್ಲಿ ಹೋಗ್ತಿದ್ದ ಬಾಲಕನ ಮೇಲೆ ಹರಿದ ಟ್ರಕ್, ಸ್ಥಳದಲ್ಲೇ ಸಾವು
ಬೈಕ್‌ಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೈಕ್‌ನಿಂದ ಬಾಲಕ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಟ್ರಕ್ ಬಾಲಕ ತಲೆ ಮೇಲೆ ಹರಿದಿದೆ. ಹೀಗಾಗಿ ಬಾಲಕ ಸ್ಥಳದಲ್ಲೇ ಅಸುನೀಗಿದ್ದಾನೆ.
ಬೆಂಗಳೂರು(ಜ.12): ಬೈಕ್‌ನಲ್ಲಿ ಹೋಗ್ತಿದ್ದ ಬಾಲಕನ ಮೇಲೆ ಹರಿದ ಟ್ರಕ್ ಹರಿದು 10 ವರ್ಷ ಬಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಣ್ಣುರು ಬಂಡೆ ರಸ್ತೆಯಲ್ಲಿ ನಡೆದಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೈಕ್‌ಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೈಕ್‌ನಿಂದ ಬಾಲಕ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಟ್ರಕ್ ಬಾಲಕ ತಲೆ ಮೇಲೆ ಹರಿದಿದೆ. ಹೀಗಾಗಿ ಬಾಲಕ ಸ್ಥಳದಲ್ಲೇ ಅಸುನೀಗಿದ್ದಾನೆ. ಹೆಣ್ಣುರು ಬಂಡೆ ರಸ್ತೆಯ ಕ್ಲಾಸಿಕ್ ರಾಯಲ್ ಗಾರ್ಡನ್ ಬಳಿ ಘಟನೆ ನಡೆದಿದೆ. ಅಂಬೇಡ್ಕರ್ ಆಸ್ಪತ್ರೆಗೆ ಬಾಲಕನ ಮೃತದೇಹ ರವಾನೆ ಮಾಡಲಾಗಿದೆ.
ಬಾವನ ಜತೆ ಲವ್ವಿ ಡವ್ವಿ, ಗಂಡನ ಹತ್ಯೆಗೆ ಪತ್ನಿ ಸ್ಕೆಚ್: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಬಿತ್ತು ಹೆಣ!