Asianet Suvarna News Asianet Suvarna News

ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ಅಧಿಕಾರಿಗಳೇ ಇಲ್ಲ: 2.58 ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ, ಭರ್ತಿ ಯಾವಾಗ ?

ರಾಜ್ಯದಲ್ಲಿ 43 ಇಲಾಖೆಗಳಲ್ಲಿ 2.58 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇದರಿಂದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದು ಕಷ್ಟವಾಗಲಿದೆ.

First Published Jun 24, 2023, 11:02 AM IST | Last Updated Jun 24, 2023, 11:02 AM IST

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಎಫೆಕ್ಟ್‌ನಿಂದಾಗಿ ರಾಜ್ಯದಲ್ಲಿ ಅವುಗಳ ಕೆಲಸಕ್ಕೆ ಸಿಬ್ಬಂದಿಯೇ ಇಲ್ಲದಂತಾಗಿದೆ. ರಾಜ್ಯದ 43 ಇಲಾಖೆಗಳಲ್ಲಿ ಸುಮಾರು 2.58 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ತಿಳಿದುಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ, ಯುವ ಸಬಲೀಕರಣ ಮತ್ತು ಕ್ರೀಡೆ, ಸಹಕಾರ ಹಾಗೂ ಇತರೆ ಇಲಾಖೆಗಳಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ ಭರ್ತಿ ಮಾಡಿ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಿಬ್ಬಂದಿ ಕೊರತೆಯಿಂದ ಕಚೇರಿಯಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಇದನ್ನೂ ವೀಕ್ಷಿಸಿ: Today Horoscope: ಈ ದಿನದ ರಾಶಿ ಭವಿಷ್ಯ ಹೀಗಿದ್ದು.. ಇಂದು ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ

Video Top Stories