Asianet Suvarna News Asianet Suvarna News

ಬೆಂಗಳೂರು: ನಿರ್ಮಾಣ ಹಂತದ ಆಸ್ಪತ್ರೆಯ ಛಾವಣಿ ಕುಸಿತ, ಮೂವರಿಗೆ ಗಾಯ

*  ನೃಪತುಂಗ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಅವಘಡ
* ಕಟ್ಟಡದ ಅವಶೇಷಗಳಡಿ ಸಿಲುಕಿದ ನಾಲ್ವರು ಕಾರ್ಮಿಕರು
*  ಇಬ್ಬರನ್ನ ಹೊರೆತೆಗೆಯೋದಕ್ಕೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ 

ಬೆಂಗಳೂರು(ಮೇ.31): ನಿರ್ಮಾಣ ಹಂತದ ಖಾಸಗಿ ಆಸ್ಪತ್ರೆಯ ಛಾವಣಿ ಕುಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ನಗರದ ನೃಪತುಂಗ ರಸ್ತೆಯಲ್ಲಿ ಇಂದು(ಮಂಗಳವಾರ) ನಡೆದಿದೆ.  ಕಟ್ಟಡದ ಅವಶೇಷಗಳಡಿ ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈಗಾಗಲೇ ಮೂವರನ್ನ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಓರ್ವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನಿಬ್ಬರನ್ನ ಹೊರೆತೆಗೆಯೋದಕ್ಕೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯ ನಡೆದಿದೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ ಅಂತ ತಿಳಿದು ಬಂದಿದೆ. 

ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

Video Top Stories