COVID 19 cases explode : ಬೋರ್ಡಿಂಗ್ ಶಾಲೆಯಲ್ಲಿ 33 ವಿದ್ಯಾರ್ಥಿಗಳಿಗೆ ಸೋಂಕು
ಆನೇಕಲ್‌ನ ಬೋರ್ಡಿಂಗ್ ಶಾಲೆಯಲ್ಲಿ 33ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಆತಂಕ ಹೆಚ್ಚಿಸಿದೆ. ಓರ್ವ ಸಿಬ್ಬಂದಿಗೂ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವೈರಸ್ ಅಟ್ಯಾಕ್ ಆಗಿದೆ
ಆನೇಕಲ್ (ನ.26): ಆನೇಕಲ್‌ನ ಬೋರ್ಡಿಂಗ್ ಶಾಲೆಯಲ್ಲಿ (Boarding School) 33ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ ಕೊರೋನಾ (Corona) ಸೋಂಕು ಕಾಣಿಸಿಕೊಂಡಿದ್ದು ಆತಂಕ ಹೆಚ್ಚಿಸಿದೆ. ಓರ್ವ ಸಿಬ್ಬಂದಿಗೂ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವೈರಸ್ ಅಟ್ಯಾಕ್ ಆಗಿದೆ. ಇದರಿಂದ ಇದೀಗ ಎಲ್ಲಾ ವಿದ್ಯಾರ್ಥಿಗಳನ್ನು(Students) ಕ್ವಾರಂಟೈನ್ ಮಾಡಲಾಗಿದೆ. ಕೊರೋನಾ ಮಾರ್ಗಸೂಚಿ ಜಾರಿಗೊಳಿಸಲು ಸೂಚನೆ ನೀಡಲಾಗಿದೆ. ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಟೆಸ್ಟ್ ಮಾಡಲಾಗುತ್ತಿದೆ. 300 ವಿದ್ಯಾರ್ಥಿಗಳಿಗೆ ಹಬ್ಬಿರುವ ಆತಂಕ ಇದೆ.
Corona In Karnataka: ಒಂದೇ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೋನಾ, ಜನರಲ್ಲಿ ಮತ್ತೆ ಆತಂಕ!
ರಾಜ್ಯದಲ್ಲಿ ಕೊರೋನಾ ವೈರಸ್ (Coronavirus) ಏರಿಳಿತವಾಗುತ್ತಿದ್ದು, ಇಂದು (ನ. 24) ರಾಜ್ಯಾದ್ಯಂತ 254 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಕೋರೋನಾದಿಂದಾಗಿ ಮೂವರು ಬಲಿಯಾಗಿದ್ದಾರೆ Deaths). ಇದರೊಂದಿಗೆ ಸೋಂಕಿತರ ಸಂಖ್ಯೆ 29,94,255ಕ್ಕೆ ಏರಿಕೆಯಾಗಿದ್ರೆ, 38,185 ಜನ ಕೊರೋನಾಗೆ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ (Karnataka Health department) ಮಾಹಿತಿ ನೀಡಿದೆ.