ಕ್ವಾರಂಟೈನ್‌ನಲ್ಲಿದ್ದವರಿಗೆ ಸೋಂಕು, ದೇವನಹಳ್ಳಿ ಸರ್ಕಾರಿ ಹಾಸ್ಟೆಲ್‌ ಸೀಲ್‌ಡೌನ್‌

  • ವಿದೇಶದಿಂದ ಬಂದು ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದ ನಾಲ್ವರಿಗೆ ಕೊರೋನಾ ಪಾಸಿಟಿವ್
  • ಹಾಸ್ಟೆಲ್ ಮತ್ತು ಸುತ್ತಮುತ್ತಲಿನ 100 ಮೀಟರ್ ಪ್ರದೇಶ ಸೀಲ್ ಡೌನ್
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರೋ ಸರ್ಕಾರಿ ಹಾಸ್ಟೆಲ್
First Published May 28, 2020, 7:44 PM IST | Last Updated May 28, 2020, 7:44 PM IST

ದೇವನಹಳ್ಳಿ (ಮೇ 28): ವಿದೇಶದಿಂದ ಬಂದು ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದ ನಾಲ್ವರಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ದೇವನಹಳ್ಳಿಯ ಸರ್ಕಾರಿ ಹಾಸ್ಟೆಲ್‌ ಮತ್ತು ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಇದನ್ನೂ ನೋಡಿ | ಮನೆ ಮನೆಗೆ ತೆರಳಿ ಪೌಷ್ಠಿಕ ಆಹಾರದ ಕಿಟ್ ನೀಡುತ್ತಿರುವ ಜಿಲ್ಲಾ ಪಂಚಾಯತ್ ಸಿಇಒ...

ದೇವನಹಳ್ಳಿ ಪಟ್ಟಣದಲ್ಲಿರೋ ಸರ್ಕಾರಿ ಹಾಸ್ಟೆಲ್ ಪಕ್ಕದಲ್ಲಿರುವ ಸಮಾಜ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆಯ ಕಛೇರಿಗಳನ್ನೂ ಕೂಡಾ ಸೀಲ್‌ಡೌನ್ ಮಾಡಲಾಗಿದೆ. 

ಹಾಸ್ಟೆಲ್ ಸುತ್ತಮುತ್ತ ಯಾರು ಓಡಾಡದಂತೆ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ನೇತೃತ್ವದಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾಸಾಯನಿಕ ಕ್ರಿಮಿನಾಶಕ ಸಿಂಪಡಣೆ  ಮಾಡಲಾಯಿತು.