ಮಂಡ್ಯದಲ್ಲಿ ಮೂರನೆ ಅಲೆ ಭೀತಿ : ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ 40 ಮಂದಿಗೆ ಸೋಂಕು
ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ನಿಧಾನವಾಗಿ ಹೆಚ್ಚಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಒಂದೇ ಗ್ರಾಮದ 40 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಕೊರೋನಾ ಮರೆತು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮಸ್ಥರಿಗೆ ಶಾಕ್ ಎದುರಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 40 ಜನರಿಗೆ ಕೊರೋನಾ ಸೋಂಕು ತಗುಲಿದೆ.
ಸೋಂಕು ದಿನೇ ದಿನೆ ಹೆಚ್ಚಾಗುತ್ತಲೇ ಇದ್ದು ಇದರಿಂದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ 3ನೇ ಅಲೆ ಭೀತಿ ಎದುರಾಗಿದೆ.
ಮಂಡ್ಯ (ಆ.15): ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ನಿಧಾನವಾಗಿ ಹೆಚ್ಚಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಒಂದೇ ಗ್ರಾಮದ 40 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಕೊರೋನಾ ಮರೆತು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮಸ್ಥರಿಗೆ ಶಾಕ್ ಎದುರಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 40 ಜನರಿಗೆ ಕೊರೋನಾ ಸೋಂಕು ತಗುಲಿದೆ
. ಕೋವಿಡ್ ಕರ್ಫ್ಯೂ : 3 ಜಿಲ್ಲೆಗಳು ಸಂಪೂರ್ಣ ಸ್ತಬ್ಧ
ಸೋಂಕು ದಿನೇ ದಿನೆ ಹೆಚ್ಚಾಗುತ್ತಲೇ ಇದ್ದು ಇದರಿಂದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ 3ನೇ ಅಲೆ ಭೀತಿ ಎದುರಾಗಿದೆ. 600 ಜನಸಂಖ್ಯೆಯಿರುವ ಗ್ರಾಮದಲ್ಲಿ 40ಕ್ಕೂ ಹೆಚ್ಚು ಕೇಸ್ ಪತ್ತೆಯಾಗಿದ್ದು, ಇಡೀ ಗ್ರಾಮವನ್ನು ಸೀಲ್ಡೌನ್ ಮಾಡಿ ತಾಲೂಕು ಆಡಳಿತ ಜನರ ಓಡಾಟಕ್ಕೆ ನಿರ್ಬಂಧ ವಿಧಿಸಿದೆ.