ಮೂರು ಬೈಕ್‌ಗಳ ನಡುವೆ ಸರಣಿ ಅಪಘಾತ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮೂರು ಬೈಕ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಸಿಲಿಕಾನ್ ಸಿಟಿಯ ಯಲಹಂಕ ಬಳಿಕ ಅನಂತಪುರದಲ್ಲಿ ನಡೆದಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಸಿಲಿಕಾನ್ ಸಿಟಿಯ ಯಲಹಂಕ(Yalahanka) ಬಳಿಕ ಅನಂತಪುರದಲ್ಲಿ ನಡೆದಿದೆ. ದ್ವಿಚಕ್ರ ವಾಹನಗಳ (Two wheelers) ಮುಖಾಮುಖಿ ಡಿಕ್ಕಿ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ. ರಾಮಗೊಂಡನಹಳ್ಳಿ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬೈಕ್‌ಗೆ(bike) ಯುವಕರು ಡಿಕ್ಕಿ ಹೊಡೆದಿದ್ದಾರೆ. ಬಳಿಕ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ.ಈ ಯುವಕರು ಕೆಳಗೆ ಬಿದ್ದಿದ್ದು, ಹಿಂದೆ ಬರುತ್ತಿದ್ದ ಮತ್ತೊಂದು ಬೈಕ್‌ನಲ್ಲಿದ್ದ ಮಹಿಳೆ ಯುವಕರ ಮೇಲೆ ಬೈಕ್‌ಗೆ ಹತ್ತಿಸಿಕೊಂಡು ಹೋಗಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಾಳು ವಿದ್ಯಾರ್ಥಿನಿ ಹಾಗೂ ಯುವಕರನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಯಲಹಂಕ‌ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ: ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

Related Video