ಕವಾಡಿಗರಹಟ್ಟಿ ಪ್ರಕರಣವನ್ನು ಸರ್ಕಾರದಿಂದ ಮುಚ್ಚಿ ಹಾಕುವ ಯತ್ನ: ನಟ ಚೇತನ್ ಆರೋಪ
ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಗೆ ನಟ ಚೇತನ್ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಚಿತ್ರದುರ್ಗ: ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿ( kavadigarahatti) ಕಲುಷಿತ ನೀರು ಸೇವಿಸಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್(Actor Chetan) ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ ನಟ ಚೇತನ್, ದಲಿತ ಕೇರಿಯಲ್ಲಿ ಮಾತ್ರ ಈ ರೀತಿ ಪ್ರಕರಣ ನಡೆದಿದೆ. ಇಡೀ ಸರ್ಕಾರಿ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ. ದ್ವೇಷದಿಂದ ವಿಷ(poison) ಬೆರೆಸಿದ ಆರೋಪದ ಬಗ್ಗೆಯೂ ತನಿಖೆ ನಡೆಯಲಿ. ಸರ್ಕಾರದಿಂದ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ ಎಂದು ಹೇಳಿದರು. ಅಲ್ಲದೇ ಕವಾಡಿಗರಹಟ್ಟಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು. ಎಸ್‌ಸಿಪಿ, ಟಿಎಸ್‌ಪಿ ಹಣ ಸರ್ಕಾರದಿಂದ ದುರ್ಬಳಕೆ ಆಗುತ್ತಿದೆ. ದಲಿತರ ಅಭಿವೃದ್ಧಿಗೆ ಮೀಸಲಿದ್ದ ಹಣ 5 ಗ್ಯಾರಂಟಿಗಳ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ನಟ ಚೇತನ್ ಪ್ರತಿಕ್ರಿಯೆ ನೀಡಿದರು.
ಇದನ್ನೂ ವೀಕ್ಷಿಸಿ: ಜೈಲಿನಿಂದ ಹೊರ ಬಂದ ನಿಮಿಷಗಳಲ್ಲೇ ಮರ್ಡರ್: ಕೊಲೆಯಾದವನು ಸೈಲೆಂಟ್ ಸುನೀಲನ ಹುಡುಗ..!