ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್: ಸಚಿವ ಅಶ್ವತ್ಥ್ ನಾರಾಯಣ್ ನೀಡಿದ ಭರವಸೆ ಏನು?
ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಚಿವ ಅಶ್ವತ್ಥ್ ನಾರಾಯಣ್ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. NEP ಯನ್ನು ಅಂಗನವಾಡಿಗಳಿಗೂ ಜಾರಿ, ಕನಿಷ್ಠ ವೇತನ, ಗ್ರ್ಯಾಚೂಟಿ ಸೇರಿದಂತೆ ಐದು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದರು. ಇದೀಗ ಸಚಿವ ಅಶ್ವತ್ಥ್ ನಾರಾಯಣ್ ಭರವಸೆ ಮೇರೆಗೆ ಮುಷ್ಕರ ವಾಪಸ್ ಪಡೆದಿದ್ದಾರೆ. ನಾಲ್ಕು ಬೇಡಿಕೆಯನ್ನು ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ: ಭಾವುಕರಾದ ಅಶ್ವಿನಿ