ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

ರಾಜ್ಯ ಸರ್ಕಾರ ನೀಡಿದ್ದ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಪ್ರಶ್ನಿಸಿದ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ ಮಾಡಲಾಗಿದೆ.

First Published Feb 29, 2024, 12:52 PM IST | Last Updated Feb 29, 2024, 1:08 PM IST

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು(Woman) ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ ಮಾಡಲಾಗಿದೆ. ಸರ್ಕಾರಿ ರಸ್ತೆ ಜೊತೆಗೆ ಬಡ ಕುಟುಂಬಕ್ಕೆ ರಾಜ್ಯ ಸರ್ಕಾರ(State Government) ನೀಡಿದ್ದ ಜಮೀನನ್ನು ‌ಒತ್ತುವರಿ(Encroachment of land) ಮಾಡಿಕೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿದ ಬಡ ಕುಟುಂಬದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ. ಮಹಿಳೆಯನ್ನು ವಿವಸ್ತ್ರಗೊಳಿಸುವ ಜೊತೆಗೆ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದೇ ಗ್ರಾಮದ ರಾಮಪ್ಪ, ಭೀಮಪ್ಪ ನಾಗನೂರಗೆ ಸರ್ಕಾರದಿಂದ ಜಮೀನು ಮಂಜೂರು ಮಾಡಲಾಗಿತ್ತು. 1991 ರಲ್ಲಿ ರಾಮಪ್ಪಗೆ ಮೂರು ಎಕರೆ ಜಮೀನು ಮಂಜೂರು ಮಾಡಿದ್ದ ಸರ್ಕಾರ. ಇದೇ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಮಪ್ಪ ನಾಗನೂರು. ಆದ್ರೆ ಕೆಲ ದಿನಗಳ ‌ಬಳಿಕ ರಾಮಪ್ಪಗೆ ಸೇರಿದ ಜಮೀನಿನ‌ 20 ಗುಂಟೆ ಒತ್ತುವರಿ ಮಾಡಲಾಗಿದೆ. ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ ದಾನೊಳ್ಳಿ,‌ ಮಾಯಪ್ಪ ಹಳ್ಯಾಳ ವಿರುದ್ಧ ‌ಒತ್ತುವರಿ ಆರೋಪ ಕೇಳಿಬಂದಿದೆ. ನಮಗೆ ರಾಜಕೀಯ ‌ನಾಯಕರ ಸಂಪರ್ಕ ಇದೆ ಎಂದು ಹೇಳಿ ದಬ್ಬಾಳಿಕೆ ಮಾಡ್ತಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸುವ ಜೊತೆಗೆ ವಿವಸ್ತ್ರಗೊಳಿಸಿ ವಿಕೃತಿ ಮೆರೆದ ಕೀಚಕರು. ಜಯಶ್ರೀ ಪುತ್ರ ಮುರಾರಿ ಮೇಲೂ ಮಾರಣಾಂತಿಕ ಹಲ್ಲೆಗೈದು ಪುಂಡಾಟ ಮೆರೆದಿದ್ದಾರೆ. 

ಇದನ್ನೂ ವೀಕ್ಷಿಸಿ:  Siddaramaiah: ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ