ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದು ತಲೆ ತಗ್ಗಿಸುವ ಕೃತ್ಯ, ಅಕ್ಷಮ್ಯ ಅಪರಾಧ: ಬಿ.ವೈ. ವಿಜಯೇಂದ್ರ

ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣವನ್ನು ಗೃಹ ಮಂತ್ರಿ ಗಂಭೀರವಾಗಿ ಪರಿಗಣಿಸಬೇಕು ಎಂದು ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.  
 

Share this Video
  • FB
  • Linkdin
  • Whatsapp

ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆ(Woman) ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ತೀವ್ರವಾಗಿ ಖಂಡಿಸಿದ್ದಾರೆ. ಇದು ತಲೆ ತಗ್ಗಿಸುವ ಕೃತ್ಯ, ಅಕ್ಷಮ್ಯ ಅಪರಾಧ. ಗೃಹ ಮಂತ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಂಥ ಘಟನೆ ಮರುಕಳಿಸದಂತೆ ಎಚ್ಚರಿಕೆವಹಿಸಲಿ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ(State government) ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ಇನ್ನೂ ಹಲ್ಲೆಗೊಳಗಾದ ಯುವಕನ ತಾಯಿಗೆ ಬೆಳಗಾವಿ(belagavi) ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯವನ್ನು ಬಿ.ವೈ. ವಿಜಯೇಂದ್ರ ವಿಚಾರಿಸಿದರು. ಇನ್ನೂ ಚಳಿಗಾಲದ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ಪ್ರಕರಣದ ಬಗ್ಗೆ ಸುನೀಲ್‌ ಕುಮಾರ್‌ ಪ್ರಸ್ತಾಪಿಸಿದರು.

ಇದನ್ನೂ ವೀಕ್ಷಿಸಿ: ಮಂಡ್ಯ: ಹೊಳೆ ಆಂಜನೇಯ ಸ್ವಾಮಿ ದರ್ಶನ ಪಡೆದ ನಟ ವಶಿಷ್ಠಸಿಂಹ, ಹರಿಪ್ರಿಯಾ

Related Video