Asianet Suvarna News Asianet Suvarna News

ಸಂಪುಟ ವಿಸ್ತರಣೆಯಿಂದ ದೂರ ಉಳಿದ ಶ್ರೀರಾಮುಲು..!

ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸಂಪುಟ ವಿಸ್ತರಣೆಯಾಗಿದೆ. 10 ಜನ ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಈ ನಡುವೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಬೇರೆ ಬೇರೆ ಜಿಲ್ಲೆಗಳಿಗೆ ಪ್ರವಾಸ ಹೋಗುತ್ತಿದ್ದಾರೆ. ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಸಚಿವರು ಮಡಿಕೇರಿಗೆ ಬಂದಿದ್ದಾರೆ.

ಮಡಿಕೇರಿ(ಫೆ.06): ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸಂಪುಟ ವಿಸ್ತರಣೆಯಾಗಿದೆ. 10 ಜನ ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಈ ನಡುವೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಬೇರೆ ಬೇರೆ ಜಿಲ್ಲೆಗಳಿಗೆ ಪ್ರವಾಸ ಹೋಗುತ್ತಿದ್ದಾರೆ. ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಸಚಿವರು ಮಡಿಕೇರಿಗೆ ಬಂದಿದ್ದಾರೆ.

ಯಾವುದೇ ಖಾತೆ ಕೊಟ್ಟರೂ ನಿಷ್ಠೆಯಿಂದ ಒಳ್ಳೆಯ ಕೆಲಸ ಮಾಡ್ತೇನೆ: ಆನಂದ ಸಿಂಗ್‌

ಸಚಿವರು ಇಂದಿನ ಪ್ರಮಾಣ ವಚನ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿ, ಸಿಎಂ ಯಡಿಯೂರಪ್ಪ ಅವರು ಸಮರ್ಥರಾಗಿದ್ದು, ಪಕ್ಷದಲ್ಲಿ ಕಾಣಿಕೊಳ್ಳುವ ಅಸಮಾಧಾನಗಳನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಡಿಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯೆ ನೀಡಲು ಸಚಿವರು ನಿರಾಕರಿಸಿದ್ದಾರೆ.