ಬಾಗಲಕೋಟೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಬೆಳೆಗಳು; ರೈತನ ಕಣ್ಣೀರು
ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ.
ಬೆಂಗಳೂರು (ಅ. 12): ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ.
ಕರ್ನಾಟಕದ ಮೇಲೆ ಭೀಭತ್ಸ ದಾಳಿಗೆ ಮುಂದಾಗಿದ್ದಾನೆ ವರುಣ!
ಮುಧೋಳ, ಹುಲಗುಂದ ತಾಲೂಕಿನಲ್ಲಿ ಮಳೆ ಭಾರೀ ಅವಾಂತರವನ್ನು ಸೃಷ್ಟಿಸಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದ ಪ್ರವಾಹ ಉಂಟಾಗಿತ್ತು. ಪ್ರವಾಹದಿಂದ ಸಾಕಷ್ಟು ಬೆಳೆ ನಾಶ ಕೂಡಾ ಆಗಿತ್ತು. ಅದರಿಂದ ಸುಧಾರಿಸಿಕೊಳ್ಳುವ ಹೊತ್ತಿನಲ್ಲಿ ಈಗ ಮತ್ತೊಮ್ಮೆ ಅವಾಂತರ ಉಂಟಾಗಿದೆ.