ಆಪರೇಶನ್ ರಾಜಕಾಲುವೆ: ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?
Operation Rajakaluve Bengaluru: ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ.
ಬೆಂಗಳೂರು (ಸೆ. 12): ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ (Bengaluru Rains) ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆಗಳ ಒತ್ತುವರಿಯಿಂದಲೇ (Rajakaluve Encroachments) ಪ್ರವಾಹ ಸೃಷ್ಟಿಯಾಗಲು ಕಾರಣ ಎಂದು ತಿಳಿದಿರುವ ಬಿಬಿಎಂಪಿ (BBMP) ಅದಕ್ಕಾಗಿ ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ. ಸೋಮವಾರದಿಂದ ದೊಡ್ಡ ಮಟ್ಟದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ. ಆದರೆ ಈ ನಡುವೆ ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ ಮಾಡುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತ ವರದಿ ಇಲ್ಲಿದೆ
ಬೆಂಗಳೂರು ಪ್ರವಾಹ ಎಫೆಕ್ಟ್: ಒತ್ತುವರಿ ತೆರವಿಗೆ ಟೊಂಕಕಟ್ಟಿ ನಿಂತ ಸಿಎಂ!