ವೈರಸ್ ದಾಳಿಗೆ ನಲುಗಿದ ಸಿಲಿಕಾನ್ ಸಿಟಿ: ಬೆಂಗ್ಳೂರಿಗೆ ಮತ್ತಷ್ಟು ಟಫ್ ರೂಲ್ಸ್..?
ಮಾರ್ಕೆಟ್‌ನಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿ ಮಾಡುವ ಸಾಧ್ಯತೆ| ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಸುಳಿವು| ಬೆಂಗಳೂರಿನಲ್ಲಿ ಜನಸಂದಣಿ ತಡೆಯೋದೆ ಬಿಬಿಎಂಪಿಗೆ ಬಹುದೊಡ್ಡ ಸವಾಲ್| ಕೊರೋನಾ ಹಾಟ್‌ಸ್ಪಾಟ್ ಆಗಿ ಮಾರ್ಪಟ್ಟ ಬೆಂಗಳೂರು|
ಬೆಂಗಳೂರು(ಏ.14): ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ. ಸದ್ಯ ಬೆಂಗಳೂರು ಕೊರೋನಾ ಹಾಟ್‌ಸ್ಪಾಟ್ ಆಗಿ ಮಾರ್ಪಟ್ಟಿದೆ. ಹೀಗಾಗಿ ಇಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನ ಜಾರಿ ಮಾಡುವ ಸಾಧ್ಯತೆ ಇದೆ. ನಗರದಲ್ಲಿರುವ ಮಾರುಕಟ್ಟೆಗಳಲ್ಲಿ 144ನ ಸೆಕ್ಷನ್ ಜಾರಿ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದು ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಅವರು ಸುಳಿವು ಕೊಟ್ಟಿದ್ದಾರೆ. ನಗರದಲ್ಲಿ ಜನಸಂದಣಿ ತಡೆಯೋದೆ ಬಿಬಿಎಂಪಿಗೆ ಬಹುದೊಡ್ಡ ಸವಾಲ್ ಆಗಿ ಮಾರ್ಪಟ್ಟಿದೆ.