Covid-19 Crisis: ಕೊರೋನಾ 3ನೇ ಅಲೆ ಎದುರಿಸಲು ಬಿಬಿಎಂಪಿ ಸನ್ನದ್ಧ
* ಬೆಂಗಳೂರಿನಲ್ಲಿ 28,067 ಬೆಡ್‌ಗಳ ವ್ಯವಸ್ಥೆ
* ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ
* ದರ ನಿಗದಿ ಉಲ್ಲಂಘಿಸಿದರೆ ಕಠಿಣ ಕ್ರಮ
ಬೆಂಗಳೂರು(ಜ.20): ಕೊರೋನಾ ಮೂರನೇ ಅಲೆಯನ್ನ ಎದುರಿಸಲು ಬಿಬಿಎಂಪಿ ಸರ್ವ ಸನ್ನದ್ದವಾಗಿದೆ. ಹೌದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ 28,067 ಬೆಡ್‌ಗಳ ವ್ಯವಸ್ಥೆಯನ್ನ ಮಾಡಿಕೊಂಡಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಸಿದ್ಧವಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ 3237 ಬೆಡ್‌ಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2696 ಹಾಸಿಗೆಗಳು ಸಿದ್ಧವಾಗಿವೆ. ಸದ್ಯ ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಬೆಡ್‌ಗಳು ರೆಡಿಯಾಗಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ಕೂಡ ನಿಗದಿ ಮಾಡಿದೆ. ದರ ನಿಗದಿ ಉಲ್ಲಂಘಿಸಿದರೆ ಸರ್ಕಾರದಿಂದ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲಾಗುವುದು ಅಂತ ಬಿಬಿಎಂಪಿ ಎಚ್ಚರಿಕೆ ನೀಡಿದೆ.