Asianet Suvarna News Asianet Suvarna News

ಬೆಂಗಳೂರಿಗರೇ ಗಮನಿಸಿ... ನಾಳೆ ನಗರದಲ್ಲಿ ಆಟೋ ಸೇವೆ ಬಂದ್‌..!

 ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಂಚಾರ ನಾಳೆ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. 

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಂಚಾರ ನಾಳೆ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರ್ಯಾಪಿಡೋ ಬೈಕ್​ ಟ್ಯಾಕ್ಸಿಯನ್ನು ನಿಷೇಧಿಸುವಂತೆ ನಗರದ 21 ಆಟೋ ಚಾಲಕರ‌ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ  ಒತ್ತಾಯ ಮಾಡಿವೆ. ಈ ಹಿನ್ನಲೆ ನಾಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿಯವರೆಗೆ ಆಟೋ ಸಂಚಾರ ಸಂಪೂರ್ಣ ಬಂದ್ ಆಗಲಿದೆ.ಒಟ್ಟೂ 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ನಾಳೆ ಬಂದ್ ಆಗುತ್ತೆ ಎಂದು ಹೇಳಲಾಗುತ್ತಿದೆ.ಅದಲ್ಲದೆ ಬೆಳಗ್ಗೆ 11ಗಂಟೆಗೆ ರೇಸ್​​​ ಕೋರ್ಸ್ ರಸ್ತೆಯಲ್ಲಿರುವ​ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ಪ್ಲಾನ್​ ಮಾಡಲಾಗಿದೆ.

Video Top Stories