ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್‌: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್‌ ಆದೇಶ

ಶಾಸಕ ಜನಾರ್ದನ ರೆಡ್ಡಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಕ್‌ ನೀಡಿದ್ದು, ಆಸ್ತಿ ಅಟ್ಯಾಚ್‌ ಮಾಡುವಂತೆ ಆದೇಶ ಹೊರಡಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್‌ ಶಾಕ್‌ ನೀಡಿದೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಅಟ್ಯಾಚ್‌ ಮಾಡುವಂತೆ ಕೋರ್ಟ್ ಆದೇಶ ಮಾಡಿದೆ. ಅರುಣಾ ಲಕ್ಷ್ಮೀ ಹೆಸರಿನಲ್ಲಿರುವ 77ಕ್ಕೂ ಹೆಚ್ಚು ಆಸ್ತಿಯನ್ನು ಅಟ್ಯಾಚ್‌ ಮಾಡುವಂತೆ ಸೂಚಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಈ ಆದೇಶವನ್ನು ಹೊರಡಿಸಲಾಗಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಇದರಿಂದ ಇವರು ಆಸ್ತಿಯ ಮೇಲಿನ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

Related Video