ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಬಿಡದಿ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ| ಬಿಡದಿ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ| 2018 ರ ಜನವರಿ 19 ರಂದು ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದ ಗಣೇಶ್|

First Published Dec 14, 2019, 1:45 PM IST | Last Updated Dec 14, 2019, 1:45 PM IST

ರಾಮನಗರ[ಡಿ.14]: ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಚಾರ್ಚ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಡಿ. 9 ರಂದು ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ  ನ್ಯಾಯಾಲಯ ಚಾರ್ಚ್ ಶೀಟ್ ಅನ್ನು ಪರಿಗಣಿಸಿದೆ. 

ಕಳೆದ 2018 ರ ಜನವರಿ 19 ರಂದು ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಅವರು ಹಲ್ಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ  ಐಪಿಸಿ ಸೆಕ್ಷನ್ 323, 324, 307, 504, 506 ಅಡಿ ಪ್ರಕರಣ ದಾಖಲಾಗಿದೆ.

Video Top Stories