Asianet Suvarna News Asianet Suvarna News

ಬೆಂಗಳೂರಿನಲ್ಲಿ ಪುಂಡರ ಹಾವಳಿ: ಕುಡಿದ ಮತ್ತಿನಲ್ಲಿ ಯುವಕನಿಗೆ ಥಳಿತ

ಬೆಂಗಳೂರಿನಲ್ಲಿ ಯುವಕನಿಗೆ ಅಟ್ಟಾಡಿಸಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸಿಲಿಕಾನ್ ಸಿಟಿಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಯುವಕನಿಗೆ ಮಾತುಕತೆಗೆ ಕರೆದು ಅಟ್ಟಾಡಿಸಿ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿ ಯುವಕನಿಗೆ ಥಳಿಸಿದ್ದು, ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.5 ರಿಂದ 6 ಜನರಿಂದ ಕಾಲುಗಳಿಂದ ತುಳಿದು ಹಲ್ಲೆ ಮಾಡಲಾಗಿದೆ. ಈ ಕುರಿತು ಯಾವುದೇ ದೂರು ಕೊಟ್ಟಿಲ್ಲ ಎಂದು ಪೊಲೀಸರು ಹೇಳಿದ್ದಾರೆ.