CET Results 2023: ಇಂಜಿನಿಯರಿಂಗ್ ವಿಭಾದಲ್ಲಿ ವಿಘ್ನೇಶ್ ಟಾಪರ್
ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ.
ಬೆಂಗಳೂರು: ಮೇ 20 ಹಾಗೂ 21 ರಂದು ಕರ್ನಾಟಕ ರಾಜ್ಯಾದ್ಯಂತ ಕೆಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಇಂದು ಸಿಇಟಿ ಪರೀಕ್ಷೆಯ ಫಲಿತಾಂಶ ಹೊರಬಂದಿದೆ. ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಒಟ್ಟು 10 ಜನ ವಿಧ್ಯಾರ್ಥಿ ಗಳು ಟಾಪಾರ್ ಬಂದಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ.ಇನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್‌ಸೈಟ್ http://kea.kar.nic.in/ ನಲ್ಲಿ ಫಲಿತಾಂಶ ಬಿಡುಗಡೆ ಮಾಡಿದೆ.
ಇದನ್ನೂ ವೀಕ್ಷಿಸಿ: ದರ್ಗಾಗೆ ಹೋದ ತಾಯಿ ಮಿಸ್ಸಿಂಗ್: ತಾಯಿಯಂತಿದ್ದವಳ ಮೇಲೆಯೇ ಕಣ್ಣು ಹಾಕಿದ್ದ ಹಂತಕ !