ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

ಶಾಸಕ ಸಿ.ಟಿ.ರವಿ ಭಾವಚಿತ್ರವಿದ್ದ ಫ್ಲೆಕ್ಸ್ ಹಾಗೂ ಸಿ.ಟಿ.ರವಿ ಫೋಟೋಗೂ ಕಿಡಿಗೇಡಿಗಳು ಬ್ಲೇಡ್ ಹೊಡೆದಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. 
 

Share this Video
  • FB
  • Linkdin
  • Whatsapp

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಾಳೆ ಮತ್ತು ನಾಡಿದ್ದು 2 ದಿನ ರಾಜ್ಯ ಯುವಜನೋತ್ಸವ ಆಯೋಜನೆ ಮಾಡಲಾಗಿದೆ. ಸದರಿ ಕಾರ್ಯಕ್ರಮದ ಪ್ರಚಾರಕ್ಕೆಂದು ಚಿಕ್ಕಮಗಳೂರು ನಗರದ ಎಲ್ಲೆಡೆ ಫ್ಲೆಕ್ಸ್ ಬ್ಯಾನರ್‌ಗಳನ್ನು ಹಾಕಿ ಸ್ವಾಗತ ಕೋರಲಾಗಿದೆ. ನಗರದ ಹನುಮಂತಪ್ಪ ವೃತ್ತದಲ್ಲಿ ಶಾಸಕ ಸಿ.ಟಿ.ರವಿ, ನಗರಸಭೆ ಅಧ್ಯಕ್ಷ ವೇಣು ಗೋಪಾಲ್, ನಗರಸಭೆ ಮಾಜಿ‌ ಅಧ್ಯಕ್ಷ ತಮ್ಮಯ್ಯ ಸೇರಿದಂತೆ ಮುಖಂಡರು ಇದ್ದ ಭಾವಚಿತ್ರಕ್ಕೆ ಕಿಡಿಗೇಡಿಗಳು ಬ್ಲೇಡ್ ಹಾಕಿದ್ದಾರೆ. ಇದರಿಂದ ಫ್ಲೆಕ್ಸ್ ಸಂಪೂರ್ಣ ನಾಶವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಡಿ.ವೈ.ಎಸ್ಪಿ. ಪುರುಷೋತ್ತಮ್, ನಗರ ಠಾಣೆಯ ಪಿ.ಎಸ್.ಐ ಹಾಗೂ ಸ್ಥಳಕ್ಕೆ ದೌಡಾಯಿಸಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಪ್ರಧಾನಿ ಮೋದಿ ಮಾತುಕತೆ!

Related Video