ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ| ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ: ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ| ನಾಗೇಂದ್ರ ಕುಟುಂಬದವರಿಗೆ ಸರ್ಕಾರಿ ನೌಕರಿ| 

First Published Aug 21, 2020, 1:55 PM IST | Last Updated Aug 21, 2020, 1:55 PM IST

ಬೆಂಗಳೂರು(ಆ.21): ಮೈಸೂರು ಜಿಲ್ಲೆಯ ನಂಜನಗೂಡಿನ ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಕೇಸನ್ನ ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 

ಬೆಂಕಿ ಇಟ್ಟ ದಂಗೆಕೋರರ ಬಣ್ಣ ಬಯಲು: ಶಾಕಿಂಗ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಸತ್ಯ ಸಂಗತಿ ತಿಳಿಯುವುದಕ್ಕೆ ತನಿಖೆಗೆ ಆದೇಶಿಸಲಾಗಿದೆ. ಸಮಗ್ರ ತನಿಖೆ ನಡೆಸಿ ಸತ್ಯ ಸಂಗತಿ ತಿಳಿಯಲು ತನಿಖೆಗೆ ಆದೇಶ ಮಾಡಿದ್ದೇನೆ. ನಾಗೇಂದ್ರ ಅವರ ಕುಟುಂಬದವರಿಗೆ ಸರ್ಕಾರಿ ನೌಕರಿ ಕೊಡೋದಕ್ಕೂ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.