Asianet Suvarna News Asianet Suvarna News

'ಸಂಸ್ಥೆ ಬಳಸಿಕೊಂಡು ಕೇಂದ್ರ ಬೆದರಿಸುವ ಕೆಲಸ ಮಾಡ್ತಿದೆ'

ಯೋಗೇಶ್ ಗೌಡ ಹತ್ಯೆ ಪ್ರಕರಣ/ ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ವಿಚಾರ/  ಕೇಂದ್ರ ಸರ್ಕಾರ ಬೆದರಿಸುವ ಕೆಲಸ ಮಾಡುತ್ತಿದೆ/ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪ

ಚಿತ್ರದುರ್ಗ(ನ. 05)  ಸಿಬಿಐ, ಐಟಿ,  ಇಡಿ ಮೂಲಕ ಒತ್ತಡ ತರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಮಾಜಿ ಸಚಿವ  ವಿನಯ್ ಕುಲಕರ್ಣಿ ಬಂಧನಕ್ಕೆ ಸಂಬಂಧಿಸಿ ಚಿತ್ರದುರ್ಗದಲ್ಲಿ ಮಾತನಾಡಿದ ಖರ್ಗೆ ಕೇಂದ್ರ ಸರ್ಕಾರ ಸಂಸ್ಥೆಗಳನ್ನು ಇಟ್ಟುಕೊಂಡು ಭಯಪಡಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.