ಛಬ್ಬಿಯಲ್ಲಿ ಬೃಹತ್‌ ಹೈಸ್ಕೂಲ್‌ ಕಟ್ಟಡ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ, ನಟ ರಿಷಬ್‌ ಶೆಟ್ಟಿ

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ 2 ಎಕರೆ 10 ಗುಂಟೆ ಜಾಗದಲ್ಲಿ ಹೈಸ್ಕೂಲ್‌ ನಿರ್ಮಾಣವಾಗುತ್ತಿದೆ.

Share this Video
  • FB
  • Linkdin
  • Whatsapp

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಛಬ್ಬಿ ಗ್ರಾಮದಲ್ಲಿ ನೂತನ ಹೈಸ್ಕೂಲ್ ನಿರ್ಮಾಣಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ನಟ ರಿಷಬ್‌ ಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು. ಸುಮಾರು ಮೂರು ದಶಕಗಳಿಂದ ಶಾಲೆಗಾಗಿ ಹೋರಾಟ ಮಾಡಲಾಗುತ್ತಿತ್ತು. ಛಬ್ಬಿ ಗ್ರಾಮದಲ್ಲಿ ಭಾನುವಾರ ಹಬ್ಬದ ವಾತಾವರಣ ಮೂಡಿತ್ತು. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷ ಕಳೆದರೂ ಶಿಕ್ಷಣ‌ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಆಗದಿರುವುದು ಬೇಸರದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಎಂ.ಆರ್. ಪಾಟೀಲ್, ಚಿತ್ರನಟ ರಿಷಬ್ ಶೆಟ್ಟಿ, ಪತ್ರಕರ್ತ ಅಜಿತ್ ಹನುಮಕ್ಕನವರ ಹಾಜರಿದ್ದರು.

ಇದನ್ನೂ ವೀಕ್ಷಿಸಿ: Today Horoscope: ಇಂದಿನಿಂದ ಆಷಾಢ ಮಾಸ ಆರಂಭ: ಯಾವ ರಾಶಿಯವರಿಗೆ ಇಂದು ಅದೃಷ್ಟ ಗೊತ್ತಾ ?

Related Video