'ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು' ಸಂತೋಷ್ ಪತ್ನಿ ಆಕ್ರೋಶ
* ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ
* ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
* ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
* ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು' ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ
ಬೆಂಗಳೂರು/ ಬೆಳಗಾವಿ(ಏ. 12) ಡೆತ್ ನೋಟ್ ಕಳಿಸಿ ಗುತ್ತಿಗೆದಾರ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ (Belagavi) ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ತಾನು ಆತ್ಮಹತ್ಯೆ ಮಾಡಿಕೊಂಡಿರುವುದು ದೊಡ್ಡ ಸುದ್ದಿಯಾಗಿದೆ. 'ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು' ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ ಒತ್ತಾಯಿಸಿದ್ದಾರೆ.
'ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ', 40% ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!
ಸಂತೋಷ್ ಪಾಟೀಲ್ (Santhosh Patil) ಕಳುಹಿಸಿರುವ ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಪ್ರತಿನಿಧಿಗಳು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ, ಅವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಹೀಗಿರುವಾಗ ಉಡುಪಿಯ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂತೋಷ್ ಪಾಟೀಲ್ ಪತ್ತೆಯಾಗಿದ್ದರು.