ಕರಾವಳಿ ಹೊರಗಡೆ ದೈವಾರಾಧನೆ: ಸಿಡಿದೆದ್ದ ಮಂಗಳೂರು ಜನ
ಮೈಸೂರು, ಬೆಂಗಳೂರಿನಲ್ಲಿ ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ, ಭಕ್ತರು ಕೊರಗಜ್ಜನ ಮೊರೆ ಹೋಗಿದ್ದಾರೆ.
ಮಂಗಳೂರು: ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವ ವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ದೈವದ ಕೋಲ, ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಆರೋಪವಿದ್ದು, ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ದ ಕಾನೂನು ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಆದಿ ಸ್ಥಳ ಮತ್ತು ತುಳುನಾಡು ಹೊರತು ಪಡಿಸಿ ಕೊರಗಜ್ಜನ ಪ್ರತಿಷ್ಠೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಮೈಸೂರು ಮೂಲದ ಕೆಲ ಭಕ್ತರಿಂದಲೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ಕಡೆ ಆರಾಧನೆ ವ್ಯವಹಾರದ ಉದ್ದೇಶವಾಗಿದ್ದು, ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಇದನ್ನು ನಿಲ್ಲಿಸದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ ಕರಾವಳಿಯ ದೈವಾರಾಧಕರು.