Asianet Suvarna News Asianet Suvarna News

ಹೆದ್ದಾರಿಯಲ್ಲಿ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಂತ ಬಸವರಾಜ ಹೊರಟ್ಟಿ

Jun 26, 2021, 6:16 PM IST

ಚಿತ್ರದುರ್ಗ, (ಜೂನ್.26): ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಬಾಲಕ ಸೇರಿದಂತೆ ದಂಪತಿಯನ್ನು ಕೂಡಲೇ ಅಸ್ಪತ್ರೆಗೆ ಸಾಗಿಸಿ ಅವರ ಜೀವ ಉಳಿಸುವಲ್ಲಿ ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೆರವಾಗಿದ್ದಾರೆ. 

ಅಪಘಾತದಲ್ಲಿ ಗಾಯಗೊಂಡಿದ್ದ ಅಂಗವಿಕಲನಿಗೆ ಡಿಕೆ ಸುರೇಶ್ ನೆರವು

ಕಾರು ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಇಂದು ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಅಪಘಾತ ಸಂಭವಿಸಿತ್ತು. ಈ ವೇಳೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಬಸವರಾಜ ಹೊರಟ್ಟಿ ಸಹಾಯಕ್ಕೆ ಧಾವಿಸಿ ಮಾನವೀಯತೆ ಮರೆದಿದ್ದಾರೆ.