77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಸಾಂಸ್ಕೃತಿಕ ಕಾರ್ಯಕ್ರಮ..ಸಾಧಕರು, ಯೋಧರಿಗೆ ಸನ್ಮಾನ

77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಚಿವ ಸಂತೋಷ್ ಲಾಡ್ ಫೌಂಡೇಶನ್ ಸೆಪ್ಟೆಂಬರ್ 3ರಂದು ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯರನ್ನ ಅಭಿನಂದಿಸಲು ವಿಶೇಷ ಲೇಸರ್ ಶೋ ಹಮ್ಮಿಕೊಳ್ಳಲಾಗಿದೆ. 
 

Share this Video
  • FB
  • Linkdin
  • Whatsapp

77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್( Santosh Lad Foundation) ವತಿಯಿಂದ ಸೆಪ್ಟೆಂಬರ್ 3 ರಂದು ವಿವಿಧ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಧಾರವಾಡದ(Dharwad) ಕೆಸಿಡಿ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಧಕರು ಹಾಗೂ ಯೋಧರನ್ನ ಸನ್ಮಾನಿಸಲು ನಿರ್ಧರಿಸಲಾಗಿದೆ. ಹಾಗೆ ನಮ್ಮ ಭವ್ಯ ಪರಂಪರೆ ಬಿಂಬಿಸುವ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಖ್ಯಾತ ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಅವರಿಂದ ಕಿರುನಾಟಕ ಪ್ರದರ್ಶನ ನಡೆಯಲಿದೆ. ಹಾಗೆ ಗಾಯಕಿ ಎಂ ಡಿ ಪಲ್ಲವಿ ಮತ್ತು ಇಂಡಿಯನ್ ಐಡಲ್ 18 ರ ವಿಜೇತ ಗಾಯಕ ಸಲ್ಮಾನ್ ಸಂಗೀತ ಸಂಜೆ ನಡೆಸಿಕೊಡಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರನ್ನ(Siddaramaiah) ಅಭಿನಂದಿಸಲು ವಿಶೇಷ ಲೇಸರ್ ಶೋ ಆಯೋಜಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಿದ್ದರಾಮಯ್ಯರನ್ನ ವಿಶೇಷವಾಗಿ ಗೌರವಿಸಲು ಸಂತೋಷ್ ಲಾಡ್ ಫೌಂಡೇಶನ್ ನಿರ್ಧರಿಸಿದೆ. 

ಇದನ್ನೂ ವೀಕ್ಷಿಸಿ:  ಮಳೆಯಿಲ್ಲದೇ ಕಂಗೆಟ್ಟ ಅನ್ನದಾತ: ಕೋಲಾರದಲ್ಲಿ ಆವರಿಸಿದ ಬರದ ಛಾಯೆ !

Related Video