ರೋಹಿಣಿ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ: ಡಿ. ರೂಪಾ ಆಡಿಯೋ ವೈರಲ್

ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. 

Share this Video
  • FB
  • Linkdin
  • Whatsapp

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಟಾಕ್ ವಾರ್ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಡಿ. ರೂಪಾ ಅವರು ಸಾಮಾಜಿಕ ಕಾರ್ಯಕರ್ತ ಗಂಗರಾಜುಗೆ ರೋಹಿಣಿ ವಿರುದ್ಧ ದೂರು ನೀಡುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಈ ಕುರಿತು ಡಿ.ರೂಪಾ ಹಾಗೂ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋ ಹೊರ ಬಿದ್ದಿದ್ದು, ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಂತಾಗಿದೆ. ಆಯಮ್ಮನ ದೆಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ, ನಾನು ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ‌ ಎಂದು ಫೋನಿನಲ್ಲಿ ಸಂಭಾಷಣೆ ಮಾಡುವಾಗ ಗಂಗರಾಜುವಿನ ಬಳಿ ಡಿ. ರೂಪಾ ಹೇಳಿದ್ದಾರೆ.

Related Video