D Roopa vs Rohini Sindhuri: ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಲಾಗಿದೆ: ಸಿಎಸ್‌ಗೆ ದೂರು ನೀಡಿದ ರೋಹಿಣಿ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು, ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ವಿರುದ್ಧ ರಾಜ್ಯ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

Share this Video
  • FB
  • Linkdin
  • Whatsapp

ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಭೇಟಿಯಾಗಿದ್ದು, ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ದೂರು ನೀಡಿದ್ದಾರೆ. ಸಿಎಸ್‌ ಭೇಟಿ ಬಳಿಕ ರೋಹಿಣಿ ಸಿಂಧೂರಿ ಮಾತನಾಡಿ, ಸರ್ಕಾರಿ ಅಧಿಕಾರಿಗಳು ಮಾಧ್ಯಮಗಳ ಮುಂದೆ ಹೋಗಬಾರದು. ರೂಪಾ ವಿರುದ್ಧ ಸಿಎಸ್‌ಗೆ ದೂರು ನೀಡಿದ್ದೇನೆ‌ ಎಂದು ತಿಳಿಸಿದ್ದಾರೆ. ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗಿದೆ. ರೂಪಾ ಆರೋಪಗಳ ಬಗ್ಗೆ ಸಿ.ಎಸ್‌ಗೆ ತಿಳಿಸಿದ್ದೇನೆ. ಅವರು ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ನಾನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿಲ್ಲ. ಸಾಮಾಜಿಕ ಜಾಲ ತಾಣದಲ್ಲಿ ಸುಳ್ಳು ಆರೋಪ ಮಾಡಬಾರದು ಎಂದು ಹೇಳಿದ್ದಾರೆ.

Big 3: ಬಡವರ ಜೊತೆ ರಾಜಕಾರಣಿಗಳ ಸಾವಿನ ಆಟ: ಮತದಾರರಿಗೆ ಕೊಟ್ಟ ಕುಕ್ಕರ ...

Related Video