ಬೆಂಗಳೂರಲ್ಲಿ ಶಿಥಿಲಾವಸ್ಥೆ ಕಟ್ಟಡ ತೆರವಿಗೆ ಡೆಡ್‌ಲೈನ್
ಬೆಂಗಳೂರಿನಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.
ಬೆಂಗಳೂರು, (ಸೆ.30): ನಗರದಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.
ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು
ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ಶಿಥಿಲಗೊಂಡಿರುವ 175 ಕಟ್ಟಡಗಳು ಹಾಗೆಯೇ ಇವೆ. ಶಿಥಿಲ ಎಂದು ಗುರುತಿಸಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡುತ್ತೇವೆ. ಬೆಸ್ಕಾಂಗೆ ಪತ್ರ ಬರೆದು ವಿದ್ಯುತ್ ಕಡಿತ ಮಾಡುತ್ತೇವೆ. ಕಟ್ಟಡಗಳ ಮಾಲೀಕರು ಇಷ್ಟಕ್ಕೆ ಅವಕಾಶ ನೀಡದೆ ಸ್ವತಃ ತಾವೇ ತೆರವುಗೊಳಿಸಲು ಮುಂದಾಗಬೇಕು ಎಂದು ಎಚ್ಚರಿಸಿದ್ದಾರೆ.