ಮದ್ಯ ಸಿಕ್ಕಿಲ್ಲವೆಂದು ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್..!
ಮದ್ಯ ತಂದುಕೊಡುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಮಹಿಳೆ ಒತ್ತಡ ಹಾಕಿದ್ದಾಳೆ. ಕೊನೆಗೂ ಮಧ್ಯ ಸಿಗದಿದ್ದಾಗ ಬೆಳಗ್ಗೆ 5 ಗಂಟೆಯ ಸುಮಾರಿಗೆ ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾಳೆ. ಇದು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಆದರೆ 10 ಗಂಟೆಗೆ ಆಸ್ಪತ್ರೆಯಲ್ಲಿ ಪತ್ತೆಯಾಗುವ ಮೂಲಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಮಾಡಿದ್ದಾಳೆ.
ಯಾದಗಿರಿ(ಆ.01): ಕುಡಿಯಲು ಮದ್ಯ ಸಿಕ್ಕಿಲ್ಲವೆಂದು ಕೊರೋನಾ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತೆ ಬೆಳ್ಳಂಬೆಳಗ್ಗೆ ನಾಪತ್ತೆಯಾಗಿದ್ದರು. ಇದಾಗಿ ಕೆಲವೇ ಗಂಟೆಯಲ್ಲಿ ಮತ್ತೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
ಮದ್ಯ ತಂದುಕೊಡುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಮಹಿಳೆ ಒತ್ತಡ ಹಾಕಿದ್ದಾಳೆ. ಕೊನೆಗೂ ಮದ್ಯ ಸಿಗದಿದ್ದಾಗ ಬೆಳಗ್ಗೆ 5 ಗಂಟೆಯ ಸುಮಾರಿಗೆ ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾಳೆ. ಇದು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಆದರೆ 10 ಗಂಟೆಗೆ ಆಸ್ಪತ್ರೆಯಲ್ಲಿ ಪತ್ತೆಯಾಗುವ ಮೂಲಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಮಾಡಿದ್ದಾಳೆ.
ಮೆಡಿಕಲ್ ಕಾಲೇಜು ಸಿಬ್ಬಂದಿ ಪ್ರತಿಭಟನೆ ; ಬೇಡಿಕೆ ಈಡೇರಿಸುವುದಾಗಿ ಸುಧಾಕರ್ ಭರವಸೆ
50 ವರ್ಷದ ಮಹಿಳೆಯ ಈ ಅವಾಂತರಕ್ಕೆ ಕೋವಿಡ್ ಆಸ್ಪತ್ರೆಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.