ಸಿದ್ದೇಶ್ವರ ಶ್ರೀಗಳು ಚೆನ್ನಾಗಿ ಇದ್ದಾರೆ: ವಚನಾನಂದ ಸ್ವಾಮೀಜಿ ಸ್ಪಷ್ಟನೆ

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅನಾರೋಗ್ಯ ಹಿನ್ನೆಲೆಯಲ್ಲಿ, ಆಶ್ರಮಕ್ಕೆ ಗಣ್ಯರು ಭೇಟಿ ನೀಡುತ್ತಿದ್ದಾರೆ.
 

Sushma Hegde  | Published: Jan 2, 2023, 4:20 PM IST

ಸಿದ್ದೇಶ್ವರ ಶ್ರೀಗಳ ಅನಾರೋಗ್ಯ ಹಿನ್ನೆಲೆಯಲ್ಲಿ ವಚನಾನಂದ ಶ್ರೀಗಳು ಶ್ರೀಗಳ ದರ್ಶನ ಪಡೆದಿದ್ದಾರೆ. ಹಾಗೂ ಸಿದ್ದರಾಮಯ್ಯ, ಎಂ.ಬಿ ಪಾಟೀಲ್‌, ಪ್ರಕಾಶ್‌ ಹುಕ್ಕೇರಿ ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿ ದರ್ಶನ ಪಡೆದಿದ್ದಾರೆ. ಶ್ರೀಗಳ ಆರೋಗ್ಯ ವಿಚಾರಿಸಿ ವಚನಾನಂದ ಶ್ರೀ ಮಾತನಾಡಿದ್ದು, ಶ್ರೀಗಳು ಆಶ್ರಮದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಚಿಕಿತ್ಸೆ ಮುಂದುವರೆದಿದೆ. ಶ್ರೀಗಳು ಚೆನ್ನಾಗಿ ಇದ್ದಾರೆ. ಯಾವುದೇ ರೀತಿಯಲ್ಲಿ ಆತಂಕ ಪಡುವ ಅವಶ್ಯಕತೆ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ಬರುವ ಅಪಪ್ರಚಾರಕ್ಕೆ ಕಿವಿಗೊಡಬೇಡಿ, ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ಹೇಳಿದರು.

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ