ಪ್ರಿಯತಮೆಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ

ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

First Published Jun 29, 2019, 1:50 PM IST | Last Updated Jun 29, 2019, 6:26 PM IST

ಮಂಗಳೂರು[ಜೂ.29]: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

‘ಶುಕ್ರವಾರ ಕಾಲೇಜು ಮುಗಿಸಿ ಮನೆ ಕಡೆಗೆ ನಡೆದು ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ಸ್ಕೂಟರ್‌ನಲ್ಲಿ ಬಂದ ಸುಶಾಂತ್ , ದೀಕ್ಷಾಳನ್ನು ಅಡ್ಡಗಟ್ಟಿ ಚೂರಿಯಿಂದ ಇರಿದಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ದೀಕ್ಷಾ ಬೊಬ್ಬೆ ಹಾಕಿದ್ದಳು. ಆಗ ಸಮೀಪದ ಆಸ್ಪತ್ರೆ ಸಿಬ್ಬಂದಿ ಹಾಗೂ ಸ್ಥಳೀಯರು ದಾಳಿಯನ್ನು ತಡೆಯಲು ಯತ್ನಿಸಿದಾಗ, ಸುಶಾಂತ್ ತನ್ನ ಕತ್ತನ್ನು ಚೂರಿಯಿಂದ ಇರಿಯುತ್ತಾ ಮತ್ತೆ ದೀಕ್ಷಾ ಮೇಲೆ ಚೂರಿಯಿಂದ ಇರಿದಿದ್ದಾನೆ. ಆತನೂ ರಸ್ತೆಗೆ ಉರುಳಿದ ನಂತರ ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ಮೂಲಕ ಇಬ್ಬರನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆ ತೀವ್ರ ನಿಗಾ ಘಟಕಕ್ಕೆ ದಾಖಲಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.