ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ: ಲಕ್ಷಾಂತರ ಮಾಲಾಧಾರಿಗಳ ಆಗಮನ
ಇಂದು ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಒಂದು ಲಕ್ಷಕ್ಕೂ ಮಾಲಾಧಾರಿಗಳು ಆಗಮಿಸಲಿದ್ದಾರೆ.
ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಗಂಗಾವತಿಯಲ್ಲಿ ಸಂಕೀರ್ತನಾ ಯಾತ್ರ ಆರಂಭವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಹನುಮಮಾಲಾಧಾರಿಗಳ ಆಗಮಿಸುತ್ತಿದ್ದಾರೆ. ಹಲಗಿ, ಗಂಗಾವತಿ, ಅಂಜನಾದ್ರಿಯಲ್ಲಿ ಮಾಲಾಧಾರಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಂದ ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ನಡೆಯಲಿದೆ. ಪಾದಾಯಾತ್ರೆ ಮೂಲಕ ಅಂಜನಾದ್ರಿಗೆ ಮಾಲಾಧಾರಿಗಳು ಆಗಮಿಸುತ್ತಿದ್ದು, ಅಂಜನಾದ್ರಿ ಹಾಗೂ ಗಂಗಾವತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿಲಾಗಿದೆ. ಅಂಜನಾದ್ರಿಯಲ್ಲಿ 100ಕ್ಕೂ ಹೆಚ್ಚು ಸಿಸಿಟಿವಿಗಳ ಅಳವಡಿಕೆ ಮಾಡಲಾಗಿದೆ.