ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲದ ಪರಿಸ್ಥಿತಿ: ಕುಡಿಯುವ ನೀರಿಗೂ ಹಾಹಾಕಾರ..!
ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಬಾರದ ಹಿನ್ನೆಲೆ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಬಾಗಲಕೋಟೆ, ಬೀದರ್, ರಾಯಚೂರಿನಲ್ಲಿ ಕುಡಿಯಲು ನೀರು ಇಲ್ಲದಂತೆ ಆಗಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗದ ಹಿನ್ನೆಲೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಅಲ್ಲಿನ ರೈತರು ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಕಲಬುರಗಿಯ ರೈತರು ಬಿತ್ತನೆಗೆ ಭೂಮಿಯನ್ನು ಹದ ಮಾಡಿಕೊಂಡಿದ್ದರು. ಆದ್ರೆ ಈಗ ಮಳೆಯೇ ಬಂದಿಲ್ಲ. ಇನ್ನೂ ರಾಯಚೂರಿನಲ್ಲೂ ಇದೆ ಪರಿಸ್ಥಿತಿ ನಿರ್ಮಾಣವಾಗಿದೆ. ಬಾಗಲಕೋಟೆಯಲ್ಲಿ ಮಳೆ ಇಲ್ಲದೇ ಕೆರೆಗಳು, ಬೋರ್‌ವೆಲ್‌ಗಳು ಬಣಗುತ್ತಿವೆ. 1882 ಅಂದರೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣ ಮಾಡಿದ ಮಚಖಂಡಿ ಕೆರೆ ನೀರಿಲ್ಲದೇ ಖಾಲಿಯಾಗಿದೆ. ಇದರಿಂದ ಜನ, ಜಾನುವಾರುಗಳು ನೀರಿಗಾಗಿ ಪರದಾಡುವಂತಾಗಿದೆ.
ಇದನ್ನೂ ವೀಕ್ಷಿಸಿ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್ ಶಾಕ್: ಬಿಲ್ ನೋಡಿ ಹೌಹಾರಿದ ವಿಟಿಯು ಕುಲಪತಿ !