ಬೆಳಗಾವಿ: ಮಾಜಿ ಸಚಿವ ವಿನಯ್ ಕುಲಕರ್ಣಿ ರಿಲೀಸ್
* ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ಗೌಡ ಹತ್ಯೆ ಪ್ರಕರಣ
* ಕಳೆದ 9 ತಿಂಗಳಿಂದ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ
* ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ
ಬೆಳಗಾವಿ(ಆ.21): ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಇಂದು(ಶನಿವಾರ) ಬಿಡುಗಡೆಯಾಗಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ತಿಂಗಳಿಂದ ವಿನಯ್ ಕುಲಕರ್ಣಿ ಜೈಲಿನಲ್ಲಿದ್ದರು. ಬೆಂಗಳೂರಿನ ಜನಪ್ರಧಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿತ್ತು.